Jeremiah 22:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದವೇ, ನೀನು ಸುರಕ್ಷಿತಳಾಗಿರುವೆ ಎಂದು ನೀನು ಭಾವಿಸಿಕೊಂಡಿರುವೆ. ಆದರೆ ನಾನು ನಿನಗೆ ಎಚ್ಚರಿಕೆಯನ್ನು ಕೊಟ್ಟೆ. ಹೌದು, ನಾನೇ ಎಚ್ಚರಿಕೆಯನ್ನು ಕೊಟ್ಟೆ, ಆದರೆ ನೀನು ಅದನ್ನು ಕಿವಿಗೆ ಹಾಕಿಕೊಳ್ಳಲು ಒಪ್ಪಲಿಲ್ಲ. ನಿನ್ನ ಬಾಲ್ಯದಿಂದಲೂ ನೀನು ಹೀಗೆಯೇ ಮಾಡಿದೆ. ಯೆಹೂದವೇ, ನಿನ್ನ ಬಾಲ್ಯದಿಂದಲೂ ನೀನು ನನ್ನ ಆಜ್ಞೆಯನ್ನು ಪಾಲಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.
Kannada BSI Bible 2016
ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನ ನೆಮ್ಮದಿಯಲ್ಲಿ ನಿನ್ನೊಡನೆ ಮಾತಾಡಿದಾಗ ಕೇಳಲೊಲ್ಲೆನು ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವದು ನಿನಗೆ ಬಾಲ್ಯದಿಂದಲೇ ಅಭ್ಯಾಸ.
Kannada Bible (KNCL) BSI 2016
ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.