Jeremiah 22:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಘನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!
Kannada BSI Bible 2016
ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!
Kannada Bible (KNCL) BSI 2016
‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ.