Jeremiah 22:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆನ್ನುತ್ತಾನೆ: “ಯೆಹೋಯಾಕೀಮನ ಮಗನೂ ಯೆಹೂದದ ರಾಜನೂ ಆಗಿರುವ ಯೆಹೋಯಾಚೀನನೇ, ನನ್ನ ಜೀವದಾಣೆಯಾಗಿಯೂ ನಿನಗೆ ಹೀಗೆ ಮಾಡುವೆನು. ನೀನು ನನ್ನ ಘಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!
Kannada BSI Bible 2016
ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!
Kannada Bible (KNCL) BSI 2016
ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,