Jeremiah 22:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಅನ್ನುತ್ತಾನೆ, ನಿಮ್ಮ ಆಚರಣೆ ನೀತಿಘದ್ಧವಾಗಿಯೂ ನ್ಯಾಯಘದ್ಧವಾಗಿಯೂ ಇರಲಿ. ಸುಲಿಗೆಗೀಡಾದವರನ್ನು ದೋಚಿಕೊಂಡವನಿಂದ ರಕ್ಷಿಸಿರಿ. ಅನಾಥರನ್ನು ಮತ್ತು ವಿಧವೆಯರನ್ನು ಹಿಂಸಿಸಙೇಡಿ; ನಿರಪರಾಊಗಳನ್ನು ಕೊಲ್ಲಙೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.
Kannada BSI Bible 2016
ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.
Kannada Bible (KNCL) BSI 2016
ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.