Jeremiah 22:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸಿಬಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನೆಐರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.
Kannada BSI Bible 2016
ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾವನೂ ದಾವೀದನ ಸಿಂಹಾಸನದಲ್ಲಿ ಕೂತು ಯೆಹೂದವನ್ನು ಆಳಿ ಬಾಳನು.
Kannada Bible (KNCL) BSI 2016
ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”