Jeremiah 22:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರೆಯುತ್ತದೆ. ಆ ರಾಜರು ತಮ್ಮ ಅಊಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಅರಸರು, ಅವರ ಅಊಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
Kannada BSI Bible 2016
ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಕೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
Kannada Bible (KNCL) BSI 2016
ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡು ನಡೆದಿರಾದರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿ ತಮ್ಮ ಪರಿವಾರದೊಡನೆ ಹಾಗು ಪ್ರಜೆಗಳೊಡನೆ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ, ಆಗ ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವರೂ, ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡುವ ಅರಸರು ತಮ್ಮ ಸೇವಕರ ಮತ್ತು ತಮ್ಮ ಜನರಸಹಿತವಾಗಿ ಈ ಅರಮನೆಯ ಬಾಗಿಲುಗಳಿಂದ ಪ್ರವೇಶಿಸಿದರು.