Jeremiah 22:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಘನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.
Kannada BSI Bible 2016
ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗನ್ನುತ್ತಾನೆ - ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ ಲೆಬನೋನಿನ ಶಿಖರದ ಹಾಗೂ ಇದ್ದೀ, ಆದರೂ ನಾನು ನಿನ್ನನ್ನು ಮರುಭೂವಿುಯನ್ನಾಗಿಯೂ ನಿರ್ಜನ ಪಟ್ಟಣವನ್ನಾಗಿಯೂ ಮಾಡುವದು ಖಂಡಿತ.
Kannada Bible (KNCL) BSI 2016
ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ, ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.