Jeremiah 22:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು? ಎಂದು ಒಬ್ಬರನೊಐಬ್ಬರು ಕೇಳುವರು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,
Kannada BSI Bible 2016
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು. ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ - ಯೆಹೋವನು ಈ ಮಹಾ ಪಟ್ಟಣಕ್ಕೆ ಹೀಗೆ ಏಕೆ ಮಾಡಿದ ಎಂದು ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ -
Kannada Bible (KNCL) BSI 2016
ಅನೇಕ ಅನ್ಯಜನಾಂಗದವರು ಈ ನಗರದ ಮಾರ್ಗವಾಗಿ ಹೋಗುತ್ತಾ ಸರ್ವೇಶ್ವರ ಈ ಮಹಾನಗರಕ್ಕೆ ಹೀಗೇಕೆ ಮಾಡಿದರೆಂದು ಮಾತಾಡಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು.