Jeremiah 23:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಸಂದೇಶವಿದು: “ಯೆಹೂದದ ಕುರುಬರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಬರು ಕುರಿಗಳನ್ನು ಹಾಳುಮಾಡುತ್ತಿದ್ದಾರೆ. ಅವರು ನನ್ನ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.
Kannada BSI Bible 2016
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದದ ಅರಸನಾದ ಯೆಹೋಯಾ ಕೀಮನ ಮಗನಾದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಬಡಗಿಯವರನ್ನೂ ಕಮ್ಮಾರರನೂ ಯೆರೂಸಲೇಮಿನಿಂದ ಸೆರೆಗೆ ಒಯ್ದು ಬಾಬೆಲಿಗೆ ತಕ್ಕೊಂಡುಹೋದ ಮೇಲೆ ಕರ್ತನು ನನಗೆ ತೋರಿಸ ಲಾಗಿ, ಅಗೋ, ಎರಡು ಪುಟ್ಟಿ ಅಂಜೂರದ ಹಣ್ಣುಗಳು ಕರ್ತನ ದೇವಾಲಯದ ಮುಂದೆ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಕಾವಲಿನ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ ಎಂಬದು ಯೆಹೋವನ ನುಡಿ.
Kannada Bible (KNCL) BSI 2016
“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ!” ಇದು ಸರ್ವೇಶ್ವರ ಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.