Jeremiah 23:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ. ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡುಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಘಳಸಿಕೊಳ್ಳುತ್ತಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ. ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ.
Kannada BSI Bible 2016
ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೀಮೆಯು ಸೂಳೆಗಾರರಿಂದ ತುಂಬಿದೆ, ದೈವಶಾಪದ ನಿವಿುತ್ತ ದೇಶವು ದುಃಖಿಸುತ್ತದೆ; ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವರ ಶೌರ್ಯವು ಅನ್ಯಾಯಸಾಧಕ.
Kannada Bible (KNCL) BSI 2016
ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.