Jeremiah 23:15 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಊಯನ್ನು ಪ್ರಾರಂಭಿಸಿದರು. ಆ ವ್ಯಾಊಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಊಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಘಂದಿತು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ ಹೀಗನ್ನುತ್ತಾನೆ - ಆಹಾ, ನಾನು ಇವರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು; ಯೆರೂಸಲೇವಿುನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ.
Kannada Bible (KNCL) BSI 2016
ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”