Jeremiah 23:17 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದೆಬಷೀಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೆ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಘಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೆ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಅಸಡ್ಡೆಮಾಡುವವರಿಗೆ - ನಿಮಗೆ ಶುಭವಾಗುವದು ಎಂಬದಾಗಿ ಯೆಹೋವನು ಅಂದಿದ್ದಾನೆ ಎಂದು ಹೇಳುತ್ತಲೇ ಇದ್ದಾರೆ; ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ - ನಿಮಗೆ ಯಾವ ಕೇಡೂ ಸಂಭವಿಸದು ಎಂದು ನುಡಿಯುತ್ತಾರೆ.
Kannada Bible (KNCL) BSI 2016
ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.