Jeremiah 23:18 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ. ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?
Kannada BSI JV (ಕನ್ನಡ ಸತ್ಯವೇದವು J.V. (BSI))
[ಅವರಲ್ಲಿ] ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ಕಂಡಿದ್ದಾರೆ? ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ?
Kannada Bible (KNCL) BSI 2016
ಇವರಲ್ಲಿ ಯಾರು ತಾನೆ ಸರ್ವೇಶ್ವರನ ಆಲೋಚನಾ ಸಭೆಯಲ್ಲಿ ಹಾಜರಿದ್ದರು? ಸರ್ವೇಶ್ವರನ ವಾಕ್ಯವನ್ನು ಕೇಳಿ ತಿಳಿದುಕೊಂಡವನಾರು? ಆ ವಾಕ್ಯಕ್ಕೆ ಲಕ್ಷ್ಯಕೊಟ್ಟು ಗ್ರಹಿಸಿಕೊಂಡವನಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?