Jeremiah 23:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.
Kannada BSI Bible 2016
ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ - ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ; ಆಹಾ, ನಿಮ್ಮ ದುಷ್ಕೃತ್ಯಗಳ ನಿವಿುತ್ತ ನಾನು ನಿಮ್ಮನ್ನು ವಿಚಾರಿಸುವೆನು.
Kannada Bible (KNCL) BSI 2016
ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.