Jeremiah 23:20 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಮಾಡಙೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಹೃದಯಾಲೋಚನೆಗಳನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.
Kannada Bible (KNCL) BSI 2016
ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.