Jeremiah 23:26 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೆ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೆ ಜನರಿಗೆ ಬೋಊಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಪಿತೃಗಳು ಬಾಳನನ್ನು ಸೇರಿ ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ ತಾವು ತಮ್ಮ ನೆರೆಹೊರೆಯವರಿಗೆ ತಿಳಿಸುವ ತಮ್ಮ ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.
Kannada Bible (KNCL) BSI 2016
ಇವರ ಪೂರ್ವಜರು ಬಾಳ್‍ದೇವತೆಯನ್ನು ಸೇರಿಕೊಂಡು ನನ್ನ ಹೆಸರನ್ನು ಮರೆತುಬಿಟ್ಟರು. ಅದೇ ಪ್ರಕಾರ ಈ ಪ್ರವಾದಿಗಳು ಸ್ವಕಲ್ಪಿತ ಸುಳ್ಳು ಕನಸುಗಳನ್ನು ಒಬ್ಬರಿಗೊಬ್ಬರು ತಿಳಿಸುವುದರ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.