Jeremiah 23:32 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಕಾಲ್ಪನಿಕ ಕನಸುಗಳನ್ನು ಬೋಊಸುವ ಸುಳ್ಳುಪ್ರವಾದಿಗಳ ವಿರೋಊಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸಬಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ ಕೊಚ್ಚಾಟದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ; ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವದಿಲ್ಲ. ಇದು ಯೆಹೋವನ ನುಡಿ.
Kannada Bible (KNCL) BSI 2016
ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.