Jeremiah 23:36 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಙೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸಬರೂಪನಾದ ದೇವರಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಭಾರ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಭಾರವಾಗಿರುವದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆಕೆಳಗು ಮಾಡಿದ್ದೀರಷ್ಟೆ.
Kannada Bible (KNCL) BSI 2016
‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೊಂದು ಹೊರೆ. ಜೀವಸ್ವರೂಪರಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.