Jeremiah 23:39 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ನನ್ನ ಸಂದೇಶವನ್ನು ‘ಭಾರವಾದ ಹೊರೆ’ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿದ ದೂರ ಎಸೆಯುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಪಟ್ಟಣವನ್ನೂ ಭಾರವೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಟ್ಟು
Kannada Bible (KNCL) BSI 2016
ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.