Jeremiah 23:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಯೆಹೋವನ ಸಂದೇಶ: “ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಘಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಘದ್ಧವಾದದ್ದನ್ನು ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
Kannada BSI Bible 2016
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.
Kannada Bible (KNCL) BSI 2016
ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.