Jeremiah 23:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ಯೆಹೋವನಿಂದ ಘಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,
Kannada BSI Bible 2016
ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಮುಂದಿನ ಕಾಲದಲ್ಲಿ ಜನರು - ಇಸ್ರಾಯೇಲ್ಯರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬದಾಗಿ ಪ್ರಮಾಣಮಾಡುವದನ್ನು ಬಿಟ್ಟು
Kannada Bible (KNCL) BSI 2016
ಬರಲಿರುವ ಆ ಕಾಲದಲ್ಲಿ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.