Jeremiah 23:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸಬದೇಶದಲ್ಲಿ ನೆಲಸುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.
Kannada BSI Bible 2016
ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು. ಇದು ಯೆಹೋವನ ನುಡಿ.
Kannada Bible (KNCL) BSI 2016
ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”