Jeremiah 23:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರವಾದಿಗಳಿಗೊಂದು ಸಂದೇಶ. ನಾನು ಘಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.
Kannada BSI Bible 2016
ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಗಳ ವಿಷಯ. ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.
Kannada Bible (KNCL) BSI 2016
ಪ್ರವಾದಿಗಳ ವಿಷಯ: ನನ್ನ ಗುಂಡಿಗೆ ಒಡೆದುಹೋಗಿದೆ ನನ್ನೆಲುಬುಗಳು ನಡುನಡುಗುತ್ತಿವೆ ಸರ್ವೇಶ್ವರನಿಗೆ, ಆತನ ಪವಿತ್ರವಾಕ್ಯಕ್ಕೆ ಪರವಶನಾದ ನಾನು ಅಮಲೇರಿದಂತವನಾದೆ. ಹೌದು, ಮದ್ಯಪಾನಕ್ಕೆ ಸೋತ ಮನುಷ್ಯನಂತಾದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.