Jeremiah 24:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಊಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಘೂಕದೆಐಚ್ಚರನು ಯೆಹೂದದ ಎಲ್ಲಾ ಘಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.
Kannada BSI Bible 2016
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮೊದಲನೇ ವರುಷವಾಗಿದ್ದ ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಯೆಹೂದದ ಸಮಸ್ತ ಜನರ ವಿಷಯ ಯೆರೆವಿಾಯನಿಗೆ ಉಂಟಾದ ವಾಕ್ಯವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಯೆಹೂದದ ಪ್ರಧಾನರನ್ನೂ ಶಿಲ್ಪಿಗಳನ್ನೂ ಕಮ್ಮಾರರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ಕಾಣಮಾಡಿದನು.
Kannada Bible (KNCL) BSI 2016
ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.