Jeremiah 24:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಖಡ್ಗ, ಕ್ಷಾಮ, ವ್ಯಾಊಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.
Kannada BSI Bible 2016
ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರಿಗೂ ಅವರ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗಕ್ಷಾಮವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.
Kannada Bible (KNCL) BSI 2016
ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”