Jeremiah 24:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ಬುಟ್ಟಿಯಲ್ಲಿ ಘಹಳ ಉತ್ತಮವಾದ ಅಂಜೂರಗಳಿದ್ದವು. ಆ ಅಂಜೂರಗಳು ಸುಗ್ಗಿಯಲ್ಲಿ ಬೇಗ ಮಾಗುವ ಹಣ್ಣುಗಳಂತಿದ್ದವು. ಆದರೆ ಇನ್ನೊಂದು ಬುಟ್ಟಿಯಲ್ಲಿ ತಿನ್ನಲಾಗದಷ್ಟು ಕೊಳೆತ ಅಂಜೂರಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ಪುಟ್ಟಿಯಲ್ಲಿ ಫಲ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು. ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.
Kannada BSI Bible 2016
ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಪುಟ್ಟಿಯಲ್ಲಿ ಫಲಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳ ಹಾಗೆ ಕಾಣುತ್ತಿದ್ದ ಅತ್ಯುತ್ತಮವಾದ ಅಂಜೂರದ ಫಲಗಳು ತುಂಬಿದ್ದವು; ಇನ್ನೊಂದು ಪುಟ್ಟಿಯಲ್ಲಿ ಯಾರೂ ತಿನ್ನದ ಹಾಗೆ ಬಹಳ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.
Kannada Bible (KNCL) BSI 2016
ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ್ದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.