Jeremiah 24:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಸ್ರಾಯೇಲ ದೇವರಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ, ಅವರಿಗೆ ಮೇಲನ್ನುಂಟುಮಾಡುವೆನು.
Kannada BSI Bible 2016
ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ ಅವರಿಗೆ ಮೇಲನ್ನುಂಟುಮಾಡುವೆನು.
Kannada Bible (KNCL) BSI 2016
“ಇಸ್ರಯೇಲರ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳು - ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳಿಸಿಬಿಟ್ಟು ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಆದರದಿಂದ ನೋಡಿ ಅವರಿಗೆ ಒಳ್ಳೆಯದನ್ನೇ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.