Jeremiah 24:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.
Kannada BSI Bible 2016
ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.
Kannada Bible (KNCL) BSI 2016
ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.