Jeremiah 24:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಊಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.
Kannada BSI Bible 2016
ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯೆಹೋವನು ಇಂತೆನ್ನುತ್ತಾನೆ - ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇವಿುನವರ ಶೇಷ, ಐಗುಪ್ತದೇಶಕ್ಕೆ ವಲಸೆಯಾದವರು, ಇವರೆಲ್ಲರನ್ನು ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ತರುವೆನು.
Kannada Bible (KNCL) BSI 2016
“ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.