Jeremiah 24:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.
Kannada BSI Bible 2016
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.
Kannada Bible (KNCL) BSI 2016
ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.