Jeremiah 25:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಇಡೀ ಪ್ರದೇಶವು ಒಂದು ಮರುಭೂಮಿಯಾಗುವುದು. ಆ ಜನಾಂಗಗಳೆಲ್ಲ ಎಪ್ಪತ್ತು ವರ್ಷಗಳವರೆಗೆ ಬಾಬಿಲೋನಿನ ರಾಜನ ಗುಲಾಮರಾಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
Kannada BSI Bible 2016
ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವದು; ಮತ್ತು ಈ ಜನಾಂಗಗಳು ಎಪ್ಪತ್ತು ವರುಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
Kannada Bible (KNCL) BSI 2016
ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.