Jeremiah 25:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಎಪ್ಪತ್ತು ವರ್ಷಗಳಾದ ಮೇಲೆ ನಾನು ಬಾಬಿಲೋನಿನ ರಾಜನನ್ನೂ ಜನರನ್ನೂ ದಂಡಿಸುವೆನು.” ಇದು ಯೆಹೋವನಿಂದ ಘಂದ ಸಂದೇಶ. “ಅವರ ಪಾಪಗಳಿಗಾಗಿ ನಾನು ಬಾಬಿಲೋನ್ ದೇಶವನ್ನು ದಂಡಿಸುವೆನು. ನಾನು ಶಾಶ್ವತವಾಗಿ ಆ ಭೂಮಿಯನ್ನು ಮರುಭೂಮಿಯನ್ನಾಗಿ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಪ್ಪತ್ತು ವರ್ಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ, ಕಸ್ದೀಯರ ದೇಶವನ್ನೂ, ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ, ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
Kannada BSI Bible 2016
ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಪ್ಪತ್ತು ವರುಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ ಕಸ್ದೀಯರ ದೇಶವನ್ನೂ ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.
Kannada Bible (KNCL) BSI 2016
ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.