Jeremiah 25:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ದೇವರಾದ ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಈ ಪಾನಪಾತ್ರೆಯನ್ನು ನನ್ನ ಕೈಯಿಂದ ತೆಗೆದುಕೋ. ಇದು ಕೋಪದ ದ್ರಾಕ್ಷಾರಸ. ನಾನು ನಿನ್ನನ್ನು ವಿವಿಧ ಜನಾಂಗಗಳಲ್ಲಿಗೆ ಕಳುಹಿಸುತ್ತಿದ್ದೇನೆ. ಆ ಜನಾಂಗಗಳಿಗೆಲ್ಲಾ ಈ ಪಾತ್ರೆಯ ದ್ರಾಕ್ಷಾರಸವನ್ನು ಕುಡಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
Kannada BSI Bible 2016
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.
Kannada Bible (KNCL) BSI 2016
ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.