Jeremiah 25:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಯೆಹೋವನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಂಡೆನು. ನಾನು ಆ ಜನಾಂಗಗಳ ಬಳಿಗೆ ಹೋದೆನು ಮತ್ತು ಆ ಜನರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ, ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.
Kannada BSI Bible 2016
ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಯೆಹೋವನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡು ಯೆಹೋವನು ಯಾವ ಜನಾಂಗಗಳ ಬಳಿಗೆ ನನ್ನನ್ನು ಕಳುಹಿಸಿದನೋ ಆ ಸಕಲ ಜನಾಂಗಗಳು ಅದರಲ್ಲಿ ಕುಡಿಯುವಂತೆ ಮಾಡಿದೆನು.
Kannada Bible (KNCL) BSI 2016
ನಾನು ಸರ್ವೇಶ್ವರನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡೆ. ಸರ್ವೇಶ್ವರ ಯಾವ ರಾಷ್ಟ್ರಗಳ ಬಳಿಗೆ ನನ್ನನ್ನು ಕಳಿಸಿದರೋ, ಆ ಎಲ್ಲ ರಾಷ್ಟ್ರಗಳು ಅದರಿಂದ ಕುಡಿಯುವಂತೆ ಮಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.