Jeremiah 25:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.
Kannada BSI Bible 2016
ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುಗೂ ಯೆಹೂದದ ಪಟ್ಟಣಗಳಿಗೂ ಅರಸರಿಗೂ ಪ್ರಧಾನರಿಗೂ ಕುಡಿಸಿದೆನು; ಇದರಿಂದ ಅವರು ಹಾಳಾಗಿ ಬೆರಗಿನ ಸಿಳ್ಳಿಗೂ ಶಾಪಕ್ಕೂ ಗುರಿಯಾಗುವದಕ್ಕೆ ಆಸ್ಪದವಾಯಿತು.
Kannada Bible (KNCL) BSI 2016
ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.