Jeremiah 25:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಅರಬೀಯರು ಮತ್ತು ಊಚ್ ದೇಶದ ಎಲ್ಲಾ ರಾಜರು ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಫಿಲಿಷ್ಟಿಯ ದೇಶದ ಎಲ್ಲಾ ರಾಜರು ಅಂದರೆ ಅಷ್ಕೆಲೋನ್, ಗಾಜಾ, ಎಕ್ರೋನ್ ಮತ್ತು ಅಷ್ಡೋದಿನ ಶೇಷಭಾಗದ ರಾಜರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,
Kannada BSI Bible 2016
ಇದಲ್ಲದೆ ಕಿರ್ಯತ್‌ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಎಲ್ಲಾ ಜನರು, ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್,
Kannada Bible (KNCL) BSI 2016
ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿದೇಶೀಯ ಜನರೆಲ್ಲರಿಗೂ, ಊಚ್ ದೇಶದ ಅರಸರೆಲ್ಲರಿಗೂ, ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ,