Jeremiah 25:26 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉತ್ತರದಲ್ಲಿ ಸಮೀಪದಲ್ಲಿದ್ದ ಮತ್ತು ದೂರದಲ್ಲಿದ್ದ ಎಲ್ಲಾ ರಾಜರನ್ನು ಈ ಪಾತ್ರೆಯಿಂದ ಒಬ್ಬರಾದ ಮೇಲೊಬ್ಬರು ಕುಡಿಯುವಂತೆ ಮಾಡಿದೆನು. ನಾನು ಭೂಮಿಯ ಮೇಲಿದ್ದ ಎಲ್ಲಾ ರಾಜ್ಯಗಳು ಯೆಹೋವನ ಕೋಪದ ಪಾತ್ರೆಯಿಂದ ಕುಡಿಯುವಂತೆ ಮಾಡಿದೆನು. ಆದರೆ ಬಾಬಿಲೋನಿನ ರಾಜನು ಎಲ್ಲಾ ದೇಶಗಳವರು ಕುಡಿದ ತರುವಾಯ ಕುಡಿಯುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೂರ ಮತ್ತು ಸಮೀಪವಿರುವ ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ ಎಂಬುದೇ ನನಗಾದ ಅಪ್ಪಣೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೇದ್ಯರ ಎಲ್ಲಾ ಅರಸರು, ದೂರವೇನು ಸಮೀಪವೇನು ಅಂತು ಉತ್ತರದೇಶದ ಎಲ್ಲಾ ಅರಸರು, ಭೂಲೋಕದಲ್ಲಿರುವ ಸಕಲರಾಜ್ಯಗಳವರು, ಇವರೆಲ್ಲರಿಗೂ ಕುಡಿಸು; ಇವರು ಕುಡಿದ ಮೇಲೆ ಶೇಷಕಿನ ಅರಸನೂ ಕುಡಿಯಲಿ [ಎಂಬದೇ ನನಗಾದ ಅಪ್ಪಣೆ].
Kannada Bible (KNCL) BSI 2016
ದೂರ - ಹತ್ತಿರವಿರುವ ಉತ್ತರ ನಾಡಿನ ಎಲ್ಲ ಅರಸರು, ಲೋಕದ ಸಕಲ ರಾಜ್ಯಗಳು, ಇವರೆಲ್ಲರು ಕುಡಿದ ಮೇಲೆ ಬಾಬಿಲೋನಿನ ಅರಸನು ಕುಡಿಯುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.