Jeremiah 25:28 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅವರು ನಿನ್ನ ಕೈಯಿಂದ ಪಾನಪಾತ್ರೆಯನ್ನು ತೆಗೆದುಕೊಳ್ಳಲು ಒಪ್ಪುವದಿಲ್ಲ. ಅವರು ಅದನ್ನು ಕುಡಿಯಲು ಒಪ್ಪುವದಿಲ್ಲ. ಆದರೆ ನೀನು ಅವರಿಗೆ ಹೀಗೆ ಹೇಳು: ನೀವು ಈ ಪಾತ್ರೆಯಿಂದ ಕುಡಿಯಲೇಬೇಕಾಗುವುದೆಂದು ಸರ್ವಶಕ್ತನಾದ ದೇವರು ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ, ಕುಡಿಯಲಿಕ್ಕೂ ಕೇಳದಿದ್ದರೆ ನೀನು ಅವರಿಗೆ ಹೀಗೆ ಹೇಳು, “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನೀವು ಕುಡಿಯಲೇ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಒಂದು ವೇಳೆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಲ್ಲದಿದ್ದರೆ ನೀನು ಅವರಿಗೆ ಹೀಗೆ ಹೇಳು - ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನೀವು ಕುಡಿಯಲೇಬೇಕು.
Kannada Bible (KNCL) BSI 2016
ಒಂದು ವೇಳೆ ಅವರು ಆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಪ್ಪದಿದ್ದರೆ ಅವರಿಗೆ ಹೀಗೆಂದು ಹೇಳು - ‘ಸರ್ವಶಕ್ತ ಸರ್ವೇಶ್ವರನ ನುಡಿ ಇವು: ನೀವು ಕುಡಿಯಲೇಬೇಕು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು.