Jeremiah 25:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಘಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು, “ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿನದವರೆಗೆ, ಇಪ್ಪತ್ತಮೂರು ವರ್ಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ; ಅದನ್ನು ನಿಮಗೆ ಪ್ರಕಟಿಸುತ್ತಲೇ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
Kannada BSI Bible 2016
ಒಂದು ವೇಳೆ ಅವರು ಕೇಳಿ ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗ ವನ್ನು ಬಿಟ್ಟು ತಿರುಗಿಕೊಂಡಾರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೋನನ ಮಗನೂ ಯೆಹೂದದ ಅರಸನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಿಂದ ಈ ದಿನದವರೆಗೆ, ಇಪ್ಪತ್ತುಮೂರು ವರುಷಗಳಿಂದಲೂ ಯೆಹೋವನು ತನ್ನ ವಾಕ್ಯವನ್ನು ನನಗೆ ದಯಪಾಲಿಸುತ್ತಿದ್ದಾನೆ; ಅದನ್ನು ನಿಮಗೆ ಸಾವಕಾಶಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ; ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
Kannada Bible (KNCL) BSI 2016
“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.