Jeremiah 25:32 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ವಿಪತ್ತುಗಳು ಘಹುಬೇಗ ದೇಶದಿಂದ ದೇಶಕ್ಕೆ ಹರಡುವವು. ಅವು ಭೂಲೋಕದ ಎಲ್ಲಾ ದೂರದೂರದ ದೇಶಗಳಲ್ಲಿ ಭಯಂಕರವಾದ ಬಿರುಗಾಳಿಯಂತೆ ಬರುವವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು, “ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವುದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದು ಬರುವುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು ಜನಾಂಗದಿಂದ ಜನಾಂಗಕ್ಕೆ ಹರಡುವದು; ದೊಡ್ಡ ಬಿರುಗಾಳಿಯು ಲೋಕದ ಕಟ್ಟಕಡೆಯಿಂದ ಎದ್ದುಬರುವದು.
Kannada Bible (KNCL) BSI 2016
ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ‘ಹರಡುವುದು ಕೇಡು ಜನಾಂಗದಿಂದ ಜನಾಂಗಕ್ಕೆ ಏಳುವುದು ಚಂಡಮಾರುತ ಲೋಕದ ಕಟ್ಟಕಡೆಯಿಂದ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.”