Jeremiah 25:35 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುರುಬರಿಗೆ ಅಡಗಿಕೊಳ್ಳಲು ಸ್ಥಳ ಸಿಕ್ಕುವದಿಲ್ಲ. ಆ ನಾಯಕರುಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ಸಿಕ್ಕುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುರುಬರು ಓಡಿಹೋಗುವದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ಮಣಿಗಳು ತಪ್ಪಿಸಿಕೊಳ್ಳುವದಕ್ಕೆ ಆಸ್ಪದ ದೊರೆಯದು.
Kannada Bible (KNCL) BSI 2016
ಕುರಿಗಾಹಿಗಳು ಓಡಿಹೋಗುವುದಕ್ಕೆ ದಾರಿ ಸಿಕ್ಕದು ಮೇಷಪಾಲರು ತಲೆತಪ್ಪಿಸಿಕೊಳ್ಳಲಿಕ್ಕೆ ಆಸ್ಪದ ದೊರಕದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು.