Jeremiah 25:38 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು, ತನ್ನ ಗುಹೆಯಿಂದ ಹೊರಬರುತ್ತಿರುವ ಭಯಂಕರವಾದ ಸಿಂಹದಂತಿದ್ದಾನೆ. ಯೆಹೋವನು ಕೋಪಗೊಂಡಿದ್ದಾನೆ. ಯೆಹೋವನ ಕೋಪವು ಆ ಜನರನ್ನು ಪೀಡಿಸುವುದು. ಅವರ ದೇಶವು ಬರಿದಾದ ಮರುಭೂಮಿಯಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸಿಂಹದಂತೆ ತನ್ನ ಗವಿಯನ್ನು ಬಿಟ್ಟು ಬಂದಿದ್ದಾನೆ. ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ” ಎಂದು ನುಡಿಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸಿಂಹದಂತೆ ತನ್ನ ಹಕ್ಕೆಯನ್ನು ಬಿಟ್ಟುಬಂದಿದ್ದಾನೆ; ಹಿಂಸಿಸುವ ಖಡ್ಗದಿಂದಲೂ ಆತನ ರೋಷಾಗ್ನಿಯಿಂದಲೂ ಅವರ ದೇಶವು ಬೆರಗಿಗೆ ಈಡಾಗಿದೆ.
Kannada Bible (KNCL) BSI 2016
ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.