Jeremiah 25:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದ್ದಾನೆ. ಆದರೆ ನೀವು ಅವರ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ನೀವು ಅವರ ಕಡೆಗೆ ಸಬಲ್ಪವೂ ಗಮನಕೊಟ್ಟಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
Kannada BSI Bible 2016
ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಸಾವಕಾಶಮಾಡದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
Kannada Bible (KNCL) BSI 2016
ಸರ್ವೇಶ್ವರ ತಮ್ಮ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಿದ್ದರು. ಆದರೂ ನೀವು ಗಮನಿಸಲಿಲ್ಲ; ಕಿವಿಗೊಡಲೂ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.