Jeremiah 25:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪ್ರವಾದಿಗಳು, “ನಿಮ್ಮ ಜೀವನಕ್ರಮವನ್ನು ಘದಲಾಯಿಸಿಕೊಳ್ಳಿರಿ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿಬಿಡಿ. ನೀವು ಘದಲಾದರೆ, ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಘಹಳ ಹಿಂದೆ ಕೊಟ್ಟ ಭೂಮಿಯಲ್ಲಿ ನೀವು ನೆಲೆಸಘಹುದು. ನೀವು ಶಾಶ್ವತವಾಗಿ ವಾಸಿಸಙೇಕೆಂದು ಆತನು ಈ ಭೂಮಿಯನ್ನು ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಿಮಗೆ ಹೇಳಿದ ಮಾತೇನೆಂದರೆ, ‘ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ. ನಿಮಗೆ ಶಾಶ್ವತ ಸ್ವತ್ತಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ.
Kannada BSI Bible 2016
ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಿಮಗೆ ಹೇಳಿಕಳುಹಿಸಿದ ಮಾತೇನಂದರೆ - ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ, ನಿಮಗೆ ಶಾಶ್ವತ ಸ್ವಾಸ್ತ್ಯವಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ನಿಮ್ಮ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ;
Kannada Bible (KNCL) BSI 2016
ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.