Jeremiah 26:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಊಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಘಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕುಳಿತುಕೊಂಡರು.
Kannada BSI Bible 2016
ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಸರದಾರರು ಈ ವರ್ತಮಾನವನ್ನು ಕೇಳಿ ಅರಮನೆಯಿಂದ ಯೆಹೋವನ ಆಲಯಕ್ಕೆ ಹತ್ತಿಬಂದು ಆ ಮಂದಿರದ ಹೊಸ ಬಾಗಿಲಿನಲ್ಲಿ ಕೂತುಕೊಂಡಿರಲಾಗಿ
Kannada Bible (KNCL) BSI 2016
ಜುದೇಯದ ನಾಯಕರಿಗೂ ಈ ಸಮಾಚಾರ ಮುಟ್ಟಿತು. ಅವರು ಅರಮನೆಯಿಂದ ಧಾವಿಸಿಬಂದು ಸರ್ವೇಶ್ವರನಾಲಯದ ಹೊಸ ಬಾಗಿಲ ಬಳಿ ಆಸೀನರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.