Jeremiah 26:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯಾಜಕರು ಮತ್ತು ಪ್ರವಾದಿಗಳು ಅಊಪತಿಗಳಿಗೂ ಇನ್ನುಳಿದ ಜನರಿಗೂ ಹೀಗೆ ಹೇಳಿದರು: “ಯೆರೆಮೀಯನನ್ನು ಕೊಲ್ಲಙೇಕು. ಅವನು ಜೆರುಸಲೇಮಿನ ಬಗ್ಗೆ ಕೆಟ್ಟ ಮಾತುಗಳನ್ನಾಡಿದ್ದಾನೆ. ಅವನು ಆಡಿದ ಆ ಮಾತುಗಳನ್ನು ನೀವೇ ಕೇಳಿದ್ದೀರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಜಕರೂ ಮತ್ತು ಪ್ರವಾದಿಗಳೂ, “ಇವನು ಮರಣದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತ ನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರೀ” ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
Kannada BSI Bible 2016
ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರೂ ಪ್ರವಾದಿಗಳೂ ಇವನು ಮರಣ ದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರಷ್ಟೆ ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.
Kannada Bible (KNCL) BSI 2016
ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.