Jeremiah 26:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಘಂದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
Kannada BSI Bible 2016
ಆಗ ನಾನು ಯೆಹೂದದ ಅರಸನಾದ ಚಿದ್ಕೀ ಯನ ಸಂಗಡ ಈ ವಾಕ್ಯಗಳ ಪ್ರಕಾರ ಮಾತನಾಡಿ ದೆನು--ಬಾಬೆಲಿನ ಅರಸನ ನೊಗಕ್ಕೆ ನಿಮ್ಮ ಹೆಗಲು ಗಳನ್ನು ಕೊಟ್ಟು ಅವನಿಗೂ ಅವನ ಜನರಿಗೂ ಸೇವೆಮಾಡಿ ಬದುಕಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು - ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು.
Kannada Bible (KNCL) BSI 2016
ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.