Jeremiah 26:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಿಮ್ಮ ನಡತೆಯನ್ನು ಘದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಘದಲಾಯಿಸಿ ನಿಮಗೆ ಕೇಡುಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
Kannada BSI Bible 2016
ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
Kannada Bible (KNCL) BSI 2016
ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.