Jeremiah 26:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ನನ್ನನ್ನು ಕೊಂದರೆ ಒಬ್ಬ ನಿರಪರಾಊಯನ್ನು ಕೊಂದದೋಷಕ್ಕೆ ಗುರಿಯಾಗುವಿರೆಂಬುದನ್ನು ಸ್ಪಷ್ಟವಾಗಿ ತಿಳಿದುಕೊಳ್ಳಿರಿ. ನೀವು ಈ ನಗರವನ್ನೂ ಇದರ ಪ್ರತಿಯೊಬ್ಬ ನಿವಾಸಿಯನ್ನೂ ಸಹ ದೋಷಿಗಳನ್ನಾಗಿ ಮಾಡುವಿರಿ. ನಿಜವಾಗಿಯೂ, ಯೆಹೋವನು ನನ್ನನ್ನು ನಿಮ್ಮಲ್ಲಿಗೆ ಕಳಿಸಿದ್ದಾನೆ. ನೀವು ಕೇಳಿದ ಸಂದೇಶವು ನಿಜವಾಗಿಯೂ ಯೆಹೋವನಿಂದ ಘಂದದ್ದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.
Kannada BSI Bible 2016
ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ನನ್ನನ್ನು ಕೊಂದುಹಾಕಿದ ಪಕ್ಷಕ್ಕೆ ನೀವೂ ಈ ಪಟ್ಟಣವೂ ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವದು ಖಂಡಿತ.
Kannada Bible (KNCL) BSI 2016
ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.