Jeremiah 26:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಘಂದವುಗಳಾಗಿವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕ ಪ್ರವಾದಿಗಳಿಗೆ, “ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ” ಎಂದು ಹೇಳಿದರು.
Kannada BSI Bible 2016
ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು -
Kannada Bible (KNCL) BSI 2016
ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.